ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಅಮೇಥಿ:  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಉತ್ತರಪ್ರದೇಶದ ಅಮೇಥಿಯಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಅಮೇಥಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ರು. ಈ ವೇಳೆ ರಾಹುಲ್ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ವಾದ್ರ, ಪತಿ ರಾಬರ್ಟ್​​ ವಾದ್ರಾ ಕೂಡ ಸಾಥ್​ ನೀಡಿದ್ರು.

ಇದಕ್ಕೂ ಮುನ್ನ ರಾಹುಲ್ ಗಾಂಧಿ ರೋಡ್​ ಶೋ ನಡೆಸಿದ್ರು. ರೋಡ್​ ಶೋನಲ್ಲಿ ರಾಹುಲ್ ಸಹೋದರಿ ಪ್ರಿಯಾಂಕಾ ವಾದ್ರಾ, ಅವರ ಪತಿ ರಾಬರ್ಟ್​​ ವಾದ್ರಾ, ಮಗ ರೈಹಾನ್ ಹಾಗೂ ಮಗಳು ಮಿರಾಯಾ ಕೂಡ ಭಾಗಿಯಾಗಿದ್ದರು.

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv