ಶಿಗ್ಗಾವಿಯಲ್ಲಿಂದು ರಾಹುಲ್​ ಮೇನಿಯಾ

ಹಾವೇರಿ: ಮತದಾನಕ್ಕೆ ಕ್ಷಣಗಣನೆ ಶುರುವಾಗುತ್ತಿದ್ದಂತೆ ರಾಷ್ಟ್ರೀಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ, ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಇಂದು ಹಾವೇರಿ ಜಿಲ್ಲೆಗೆ ಆಗಮಿಸಲಿದ್ದಾರೆ. ಶಿಗ್ಗಾವಿಯಲ್ಲಿ ನಡೆಯುವ ಬೃಹತ್​ ಸಮಾವೇಶದಲ್ಲಿ ರಾಹುಲ್​ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ 30 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರುವ ಸಾಧ್ಯತೆಯಿದೆ. ಸಮಾವೇಶ ಹಿನ್ನೆಲೆಯಲ್ಲಿ ಶಿಗ್ಗಾವಿಯಲ್ಲಿ ಪೊಲೀಸ್​ ಸರ್ಪಗಾವಲು ಹಾಕಲಾಗಿದ್ದು, 500ಕ್ಕೂ ಹೆಚ್ಚು ಪೊಲೀಸರು ಹಾಗೂ ಯೋಧರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇನ್ನು ರಾಹುಲ್​ಗೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್​ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಿಎಂ ಇಬ್ರಾಹಿಂ, ಸಲೀಂ ಅಹಮದ್​ ಸೇರಿದಂತೆ ಹಲವು ರಾಜ್ಯ ಕಾಂಗ್ರೆಸ್​ ಮುಖಂಡರು ಸಾಥ್​ ನೀಡಲಿದ್ದಾರೆ.