ಕಾಂಗ್ರೆಸ್​​ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ಸಾಧ್ಯತೆ?

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನಾಳೆ ರಾಜೀನಾಮೆ ನೀಡೋ ಸಾಧ್ಯತೆ ಇದೆ. ನಾಳೆ ಕಾಂಗ್ರೆಸ್​​ ಕಾರ್ಯಕಾರಿಣಿ ಸಭೆಯಲ್ಲಿ ಸೋಲಿನ ಪರಾಮರ್ಶೆ ನಡೆಯಲಿದ್ದು, ಈ ವೇಳೆ ರಾಹುಲ್ ರಿಸೈನ್​ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಹಿನಾಯ ಸೋಲು ಕಂಡ ಹಿನ್ನೆಲೆ, ಅದರಲ್ಲೂ ತವರು ಕ್ಷೇತ್ರ ಅಮೇಥಿಯಲ್ಲಿ ಸೋಲು ಅನುಭವಿಸಿದ ಕಾರಣ ರಾಹುಲ್​ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಅಮೇಥಿಯಲ್ಲಿ ರಾಹುಲ್ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ 55 ಸಾವಿರ ಮತಗಳಿಂದ ಪರಾಭವಗೊಂಡಿದ್ದಾರೆ.

“ಕಾಂಗ್ರೆಸ್​ ಸೋಲಿಗೆ ನಾನೇ ಸಂಪೂರ್ಣ ಹೊಣೆ ಹೊತ್ತುಕೊಳ್ಳುತ್ತೇನೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿ ಹಾಗೂ ಇತರೆ ಹಿರಿಯ ಕಾಂಗ್ರೆಸ್​​ ಮುಖಂಡರೆದುರು ಹೇಳಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದ್ರೆ, ಅವರ ರಾಜೀನಾಮೆಯನ್ನು ಕಾಂಗ್ರೆಸ್ ವರಿಷ್ಠೆ ಹಾಗೂ ರಾಹುಲ್ ತಾಯಿ ಸೋನಿಯಾ ಗಾಂಧಿ ತಳ್ಳಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.

ಆದ್ರೆ ಕಾಂಗ್ರೆಸ್​ ವಕ್ತಾರ ರಣದೀಪ್​ ಸುರ್ಜೇವಾಲಾ, ರಾಹುಲ್ ರಾಜೀನಾಮೆ ವರದಿಗಳನ್ನ ತಳ್ಳಿಹಾಕಿದ್ದಾರೆ.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv