ಮೋದಿ ಬೆನ್ನಲ್ಲೇ ರಾಜ್ಯಕ್ಕೆ ರಾಹುಲ್,​ ನಿಖಿಲ್​ ಪರ ಪ್ರಚಾರ ಮಾಡ್ತಾರೆ ರಾಗಾ

ಬೆಂಗಳೂರು: ಪ್ರಧಾನಿ ಮೋದಿ ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರವಾಸ ಕೈಗೊಳ್ಳಲಿದ್ದಾರೆ. ಏ.13 ರಂದು ಇಡೀ ದಿನ ರಾಹುಲ್ ಗಾಂಧಿ ಮೈತ್ರಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏ.13ರ ಬೆಳಗ್ಗೆ 12 ಗಂಟೆಗೆ ಕೋಲಾರದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ, ಮೈತ್ರಿ ಅಭ್ಯರ್ಥಿ ಕೆ.ಹೆಚ್ ಮುನಿಯಪ್ಪ ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದು, ದೋಸ್ತಿ ಅಭ್ಯರ್ಥಿ ಚಂದ್ರಪ್ಪ ಪರ‌ ಪ್ರಚಾರ ನಡೆಸಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಕೆ.ಆರ್ ನಗರಕ್ಕೆ ತೆರಳಲಿರುವ ಕಾಂಗ್ರೆಸ್ ಅಧ್ಯಕ್ಷ ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv