ರಾಜ್ಯದಲ್ಲಿ ಉತ್ತಮ ಮಳೆ, ಬೇಡಿಕೆ ಕಳೆದುಕೊಂಡ ‘ವಿದ್ಯುತ್’..!

ರಾಯಚೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಕುಸಿತಗೊಂಡಿದ್ದು, ಆರ್​ಟಿಪಿಎಸ್ ನ 5 ಘಟಕಗಳು ವಿದ್ಯುತ್‌ ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ. ರಾಯಚೂರಿನ ಶಕ್ತಿನಗರದಲ್ಲಿರುವ ಆರ್​ಟಿಪಿಎಸ್ 5 ಘಟಕಗಳು ಸ್ಥಗಿತಗೊಂಡಿದ್ದು ಸದ್ಯ 2 ಮತ್ತು 4 ಹಾಗು 5, ಈ ಮೂರು ಘಟಕಗಳಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇದಕ್ಕೂ ಮುಂಚೆ ಒಟ್ಟು 8 ಘಟಕಗಳಿಂದ 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಆದ್ರೆ ಈಗ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇವಲ ಮೂರು ಘಟಕಗಳಿಂದ ಕೇವಲ 487 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಅಂತಾ ಆರ್​ಟಿಪಿಎಸ್ ಮೂಲಗಳು ತಿಳಿಸಿವೆ .

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv