ಕಾಫಿನಾಡಲ್ಲಿ ಸತತ​ ಮಳೆ: ಕೋಡಿ ಬಿದ್ದ ಹಿರೇಕೊಳಲೆ ಕೆರೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕಳಸ, ಶೃಂಗೇರಿ, ಕುದುರೆಮುಖ, ಬಾಳೆಹೊನ್ನೂರು, ಕೊಪ್ಪ, ಎನ್.ಆರ್.ಪುರ ಹಾಗೂ ಮೂಡಿಗೆರೆಯಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹೇಮಾವತಿ ನದಿ ಕೂಡಾ ಮೈದುಂಬಿ ಹರಿಯುತ್ತಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಗಿರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಐತಿಹಾಸಿಕ ಹಿರೇಕೊಳಲೆ ಕೆರೆ ಕೋಡಿ ಬಿದ್ದಿದೆ. ನಾಲ್ಕು ವರ್ಷಗಳ ಬಳಿಕ ಈ ಕೆರೆ ಕೋಡಿ ಬಿದ್ದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ನಗರದಿಂದ ಎಂಟು ಕಿಲೋಮೀಟರ್​ ದೂರದಲ್ಲಿರುವ ಈ ಕೆರೆಯಿಂದಲೇ ಚಿಕ್ಕಮಗಳೂರು ನಗರದಾದ್ಯಂತ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೇ ಸಾಕಷ್ಟು ಸಿನಿಮಾಗಳ ಚಿತ್ರೀಕರಣ ಕೂಡಾ ಹಿರೇಕೊಳಲೆ ಕೆರೆಯಲ್ಲಿ ನಡೆಯುತ್ತೆ. ಕೆರೆ ಕೋಡಿ ಬಿದ್ದಿರುವುದನ್ನು ನೋಡಲು ಪ್ರವಾಸಿಗರು ಇತ್ತ ಹೆಜ್ಜೆ ಹಾಕುತ್ತಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv