ಕೆರೆಯಂತಾದ ಶೃಂಗೇರಿ ಮಠದ ಬೀದಿ ಮತ್ತು ರಸ್ತೆಗಳು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಶೃಂಗೇರಿ, ಕೊಪ್ಪ, ಮೂಡಿಗೆರೆ, ಎನ್.ಆರ್‌.ಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹಿನ್ನೆಲೆ ಶೃಂಗೇರಿ, ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆಯಾಗಿದೆ. ಭದ್ರಾ, ತುಂಗಾ, ಹೇಮಾವತಿ ನದಿಗಳ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಶೃಂಗೇರಿ ಮಠದ ಬೀದಿ ಹಾಗೂ ರಸ್ತೆಗಳು ಅಕ್ಷರಶಃ ಕೆರೆಯಂತಾಗಿದೆ. ಪ್ರವಾಹದಿಂದ ಶೃಂಗೇರಿಯ ದೇವಸ್ಥಾನ ಭಾಗ ಕೆರೆಯಂತಾಗಿದ್ದು, ಅನೇಕ ಕಡೆಗಳಲ್ಲಿ ರಸ್ತೆ ಕಾಣದಂತೆ ಸಂಪೂರ್ಣವಾಗಿ ನೀರು ಆವರಿಸಿದೆ.

ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ಇನ್ನೂ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗುತ್ತಿದೆ. ಇದರಿಂದ ಸ್ಥಳೀಯರು ಭಯದಲ್ಲಿ ಜೀವನ ಕಳೆಯುವಂತಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:contact@firstnews.tv