ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

ಬೆಳಗಾವಿ: ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾದ ಕಾರಣ, ನೈರುತ್ಯ ಮುಂಗಾರು ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿಗೆ ಅಡಿಯಿಟ್ಟಿದೆ. ಆದ್ದರಿಂದ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗುತ್ತಿದೆ. ಹುಕ್ಕೇರಿ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಮನೆಗಳ ಒಳಗೆ ಮಳೆ ನೀರು ನುಗ್ಗಿದೆ. ನೀರು ಹೊರಹಾಕಲು ಜನರು ಹರಸಾಹಸಪಟ್ಟಿದ್ದಾರೆ. ಕೆಲವರಿಗೆ ಗ್ರಾಮದ ಸಮುದಾಯ ಭವನಗಳಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv