ನಗರದಲ್ಲಿ ಭಾರೀ ಮಳೆ, ಇನ್ನೂ 3 ದಿನಗಳು ಸಾಧಾರಣ ಮಳೆ ಸಾಧ್ಯತೆ!

ಬೆಂಗಳೂರು: ನಗರದ ಹಲವು ಭಾಗದಲ್ಲಿ ಭಾರೀ ಮಳೆಯಾಗಿದೆ. ಡಬ್ಬಲ್ ರೋಡ್, ಲಾಲ್ ಬಾಗ್, ಶಾಂತಿನಗರ, ಕಾರ್ಪೊರೇಶನ್, ಶಿವಾಜಿ ನಗರ ಹಾಗೂ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ಧಾರಾಕಾರವಾಗಿ ನೀರು ಹರಿಯುತ್ತಿದ್ದು, ಮಳೆಯಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಆಗಿದೆ. ಇನ್ನು, ಕೆಲವು ವಾಹನ ಚಾಲಕರು ಮಳೆಯನ್ನೂ ಲೆಕ್ಕಿಸದೆ ಮಳೆಯಲ್ಲಿಯೇ ವಾಹನ ಚಾಲನೆ ಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಗೆ ತೆರಳುತ್ತಿದ್ದಾರೆ.

ಇನ್ನು, ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಅಲ್ಲದೇ, ಇನ್ನೂ ಮೂರು ದಿನಗಳು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv