ಕರಾವಳಿ, ಉಡುಪಿ ಭಾಗಗಳಲ್ಲಿ ಮತ್ತೆ ಮಳೆ ಶುರು

ಮಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿ ಮತ್ತು ಉಡುಪಿ ಭಾಗಗಳಲ್ಲಿ ಸುರಿಯುತ್ತಿದ್ದ ಮಳೆ ಮತ್ತೆ ಪ್ರಾರಂಭವಾಗಿದೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಸುಳ್ಯ ತಾಲೂಕಿನಲ್ಲಿ ಮತ್ತೆ ಎಡೆಬಿಡದೇ ಮಳೆ ಸುರಿಯುತ್ತಿದ್ದು, ನೇತ್ರಾವತಿ, ಕುಮಾರಧಾರಾ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ. ಇನ್ನು ಬೈಂದೂರು, ಹೆಬ್ರಿ, ಎಣ್ಣೆಹೊಳೆ ಮತ್ತು ಕೊಲ್ಲೂರು ಭಾಗಗಳಲ್ಲಿ ಮಳೆ ಬಿಟ್ಟೂಬಿಡದೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಸಮುದ್ರದ ಅಬ್ಬರ ಜೋರಾಗಿದೆ. ಮಲ್ಪೆ, ಕಾಪು, ಉದ್ಯಾವರ, ಮಟ್ಟು ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಕಡಲ್ಕೊರೆತ ಉಂಟಾಗಿದೆ. ನಾಡ ದೋಣಿ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv