ಕನ್ನಡಿಗರ ಕೆಂಗಣ್ಣಿಗೆ ಗುರಿಯಾಯ್ತು ರಜನಿ ಟ್ವೀಟ್

ರಾಮನಗರ: ಕಾವೇರಿ ನದಿನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕದ ಪರ ತೀರ್ಪು ಪ್ರಕಟಗೊಂಡಿದ್ದರಿಂದ ತಮಿಳು ಸೂಪರ್​​ ಸ್ಟಾರ್​​​​​​​​​​ ನಟ ರಜಿನಿಕಾಂತ್ ಅಸಮಾಧಾನಗೊಂಡಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ವಿಚಾರವಾಗಿ ಟ್ವೀಟ್ ಮಾಡಿರುವ ನಟ ರಜನಿಕಾಂತ್ ತಮಿಳುನಾಡು ರೈತರಿಗೆ ಅನ್ಯಾಯವಾಗಿದೆ, ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ಎಂದು ತಮಿಳುನಾಡು ಸರ್ಕಾರವನ್ನು ಕೋರಿದ್ದಾರೆ. ಈ ಟ್ವೀಟ್ ಅನ್ನು ಖಂಡಿಸಿ ಚನ್ನಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಜಿನಿಕಾಂತ್ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು  ಕೂಡಲೇ ರಜಿನಿಕಾಂತ್ ಕನ್ನಡಿಗರಿಗೆ ಕ್ಷಮೆ ಕೇಳಬೇಕೆಂದು ಆಗ್ರಹ ಮಾಡಿದ್ದಾರೆ.

Leave a Reply

Your email address will not be published. Required fields are marked *