ರಾಮಲಿಂಗಾರೆಡ್ಡಿ ಹಾಗೂ ಎಚ್​​.ಕೆ ಪಾಟೀಲ್ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರೊಟೆಸ್ಟ್​​​

ಬೆಳಗಾವಿ: ನಿನ್ನೆ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಸಚಿವರು ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಉಭಯ ಪಕ್ಷಗಳ ಹಿರಿಯ ಶಾಸಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಇದು ಭಿನ್ನಮತಕ್ಕೆ ಕಾರಣವಾಗಿದೆ. ಇದರ ನಡುವೆ ತಮ್ಮ ನಾಯಕರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕಾಗಿ ಬೆಂಬಲಿಗರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ರಾಮಲಿಂಗಾರಡ್ಡಿ ಹಾಗೂ ಎಚ್​​.ಕೆ ಪಾಟೀಲ್​​​​​ಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ನಗರದಲ್ಲಿ ಬೆಳಗಾವಿ ರೆಡ್ಡಿ ಸಂಘ ಪ್ರತಿಭಟನೆ ನಡೆಸಿತು. ಬಳಿಕ ರೆಡ್ಡಿ ಸಮುದಾಯದ ಇಬ್ಬರಿಗೂ ಸಚಿವ ಸ್ಥಾನ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಚಿವ ಸ್ಥಾನ ನೀಡದೆ ಹೊದಲ್ಲಿ ಸಮಿಶ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.