ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರ ಪ್ರತಿಭಟನೆ

ಬೆಂಗಳೂರು: ಸಚಿವ ಸ್ಥಾನ ವಂಚಿತರಾದ ಅತೃಪ್ತ ಹಿರಿಯ ಮುಖಂಡರ ಕಸರತ್ತು ನಡೆಯುತ್ತಿದ್ದಂತೇ ಈ ಸಾಲಿಗೆ ಈಗ ರಾಮಲಿಂಗಾ ರೆಡ್ಡಿ ಕೂಡ ಸೇರಿಕೊಂಡಿದ್ದಾರೆ. ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಕಚೇರಿ ಮುಂದೆ ರಾಮಲಿಂಗಾ ರೆಡ್ಡಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಹೆಚ್.ಕೆ ಪಾಟೀಲ್, ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ.ಪಾಟೀಲ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ಆದರೂ, ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿ ಇದ್ಯಾವುದರ ಉಸಾಬರಿಗೂ ಹೋಗದೆ ದೂರ ಉಳಿದಿದ್ದರು. ಸಚಿವ ಸ್ಥಾನ ತಪ್ಪಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ನಡೆಸಿದರೂ ರಾಮಲಿಂಗಾ ರೆಡ್ಡಿ ಮಾತ್ರ ಮಗಳ ಪರ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ಪುತ್ರಿ ಸೌಮ್ಯರೆಡ್ಡಿಯನ್ನ ಗೆಲ್ಲಿಸಿಕೊಳ್ಳುವ ಸಲುವಾಗಿ ಜಯನಗರ ಕ್ಷೇತ್ರದಲ್ಲೇ ರಾಮಲಿಂಗಾ ರೆಡ್ಡಿ ಉಳಿದಿದ್ದರು.

 

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv