ಮಾಜಿ ಸಚಿವ ರಾಮಲಿಂಗಾರೆಡ್ಡಿ ಬೆಂಬಲಿಗರು ಶ್ರೀಲಂಕಾದಲ್ಲಿ ನಾಪತ್ತೆ

ಬೆಂಗಳೂರು: ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ 7 ಜೆಡಿಎಸ್​​ ಮುಖಂಡರು ನಾಪತ್ತೆಯಾಗಿದ್ದು, ಅವರಲ್ಲಿ ಇಬ್ಬರು ಸಾವನ್ನಪ್ಪಿರೋದು ಖಚಿತವಾಗಿದೆ. ಈ ಮಧ್ಯೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಬೆಂಬಲಿಗರು ಕೂಡ ಶ್ರೀಲಂಕಾದಲ್ಲಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ರಾಮಲಿಂಗಾರೆಡ್ಡಿ ಬೆಂಬಲಿಗರು ನಿನ್ನೆ ನಡೆದ ಸರಣಿ ಬಾಂಬ್ ಸ್ಫೋಟದ ಬಳಿಕ ನಾಪತ್ತೆಯಾಗಿದ್ದಾರೆ. ರಾಮಲಿಂಗಾರೆಡ್ಡಿ ಬೆಂಬಲಿಗ ನಾಗರಾಜ ರೆಡ್ಡಿ ಸಂಪರ್ಕಕ್ಕೆ ಸಿಗುತ್ತಿಲ್ಲ. ಮತ್ತೊಬ್ಬ ಬೆಂಬಲಿಗ ಪುರುಷೋತ್ತಮ್​ಗೆ ಬಾಂಬ್ ದಾಳಿಯಲ್ಲಿ ತೀವ್ರ ಗಾಯವಾಗಿದ್ದು, ಶ್ರೀಲಂಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗ್ತಿದೆ. ಈ ಹಿನ್ನಲೆ ಇಬ್ಬರ ಕುಟುಂಬಸ್ಥರು ಆತಂಕದಲ್ಲಿದ್ದಾರೆ.

ಪುರುಷೋತ್ತಮ್

ನಾಗರಾಜ್ ರೆಡ್ಡಿ


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv