ಬಸ್ಸಿನಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಕಳ್ಳನಿಗೆ ಧರ್ಮದೇಟು

ರಾಮನಗರ: ಕೆಎಸ್ಆರ್​​ಟಿಸಿ ಬಸ್ಸಿನಲ್ಲಿ ಕಳ್ಳತನಕ್ಕೆ ಯತ್ನಿಸಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೋರನೊಬ್ಬನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ರಾಮನಗರದ ಚನ್ನಪಟ್ಟಣದಲ್ಲಿ ನಡೆದಿದೆ. ಉಮರ್ ಎಂಬಾತ ಚನ್ನಪಟ್ಟದ ಸರ್ಕಾರಿ ಬಸ್ನಲ್ಲಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದು ಧರ್ಮದೇಟು ತಿಂದಿದ್ದಾನೆ.

ಈತ ಮೂಲತಃ ಬೆಂಗಳೂರಿನ ಸುಂಕದಕಟ್ಟೆ ನಿವಾಸಿಯಾಗಿದ್ದು ರಾಮನಗರದಿಂದ ಚನ್ನಪಟ್ಟಣದ ಕಡೆಗೆ ಹೋಗುವ ಸರ್ಕಾರಿ ಬಸ್ ಹತ್ತಿದ್ದ. ಈ ವೇಳೆ ಸಹಪ್ರಯಾಣಿಕ ಸುರೇಶ್ ಎಂಬುವರ ಮೊಬೈಲ್​​ ಎಗರಿಸಿದ್ದಾನೆ. ಉಮರ್ ನಡವಳಿಕೆಯಿಂದ ಅನುಮಾನಗೊಂಡ ಸುರೇಶ್ ಬಸ್​​​ನಲ್ಲಿಯೇ ಆತನಿಗೆ ಥಳಿಸಿದ್ದಾರೆ. ಬಳಿಕ ಉಮರ್ ಮೊಬೈಲ್ ಬಿಸಾಡಿ ಪಕ್ಕದಲ್ಲೇ ಇದ್ದ ಸುರೇಶ್ ಮಗಳ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಸುರೇಶ್ ಕೂಗಿ ಸಾರ್ವಜನಿಕರ ಸಹಾಯ ಕೇಳಿದಾಗ, ಸ್ಥಳದಲ್ಲಿ ಜಮಾಯಿಸಿದ ಜನರು ಉಮರ್ಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು. ಈ ಸಂಬಂಧ ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *