ನಿತ್ಯಾನಂದ ವಿರುದ್ಧ ಜಾಮೀನು ರಹಿತ ವಾರಂಟ್​..!

ರಾಮನಗರ: ಆತ್ಯಾಚಾರ ಅರೋಪ ಹೊತ್ತಿರುವ ಬಿಡದಿ ಧ್ಯಾನ ಪೀಠದ ನಿತ್ಯಾನಂದ ಸ್ವಾಮಿಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ. ಅತ್ಯಾಚಾರ ಹಾಗೂ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನಿತ್ಯಾನಂದನ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ನಿತ್ಯಾನಂದ ಗೈರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ನಿತ್ಯಾನಂದನ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ನೀಡಿದೆ. ಪ್ರಕರಣದ ಪ್ರಮುಖ ಸಾಕ್ಷಿ ಲೆನಿನ್ ಕುರುಪ್ಪನ್​ನನ್ನು ನ್ಯಾಯಾಲಯ ಎರಡು ದಿನ ಇನ್ ಕ್ಯಾಮೆರಾ ಪ್ರೊಸೆಡಿಂಗ್ ಮೂಲಕ ವಿಚಾರಣೆ ನಡೆಸುತಿತ್ತು. ಈ ವೇಳೆ ನಿತ್ಯಾನಂದ ಕೂಡಾ ಹಾಜರಾಗುವಂತೆ ಸೂಚನೆ ನೀಡಿತ್ತು. ಆದ್ರೆ ನಿತ್ಯಾನಂದ ಗೈರು ಹಾಜರಾಗುವ ಮೂಲಕ ಕೇಸ್ ನಿಧಾನಗತಿಯಲ್ಲಿ ಸಾಗುವಂತೆ ಮಾಡುತ್ತಿದ್ದಾನೆ ಅಂತಾ ವಿಚಾರಣೆಯನ್ನ ಇದೇ ಸೆಪ್ಟೆಂಬರ್ 14 ಕ್ಕೆ ಮುಂದೂಡಿ, ಆತನ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv