ಪ್ರಮಾಣವಚನ ಸ್ವೀಕರಿಸಿದ ಪರಿಷತ್‌ ನೂತನ ಸದಸ್ಯರು

ಬೆಂಗಳೂರು: ವಿಧಾನ ಪರಿಷತ್‌ನ ನೂತನ ಸದಸ್ಯರುಗಳಾದ ರಮೇಶ್ ಗೌಡ ಹಾಗೂ ಎಂ.ಸಿ.ವೇಣುಗೋಪಾಲ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿ ಪರಿಷತ್ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
ವಿಧಾನಸೌಧದ ಮೊದಲನೇ ಮಹಡಿಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ಕುಟುಂಬ ಸದಸ್ಯರು ಬರುವವರೆಗೂ ಪ್ರಮಾಣ ವಚನ ಸ್ವೀಕರಿಸದ ಕಾಂಗ್ರೆಸ್‌ ಸದಸ್ಯ ಎಂ.ಸಿ.ವೇಣುಗೋಪಾಲ್‌, ಸ್ವಲ್ಪ ಸಮಯ ಕೊಡಿ. ಮನೆಯವರು ಬಂದ ಬಳಿಕವೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದರು. ಅದೇ ರೀತಿ ಕುಟುಂಬ ಸದಸ್ಯರು ಬಂದ ನಂತರವೇ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನು, ಜೆಡಿಎಸ್‌ ಸದಸ್ಯ ರಮೇಶ್‌ ಗೌಡ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ನ, ಮತ್ತು ಸಿಎಂ ಕುಮಾರಸ್ವಾಮಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv