ಇವತ್ತು ರಾಜೀನಾಮೆ ನಿರ್ಧಾರದ ಬಗ್ಗೆ ಯೋಚನೆ ಮಾಡುತ್ತೇನೆ -ರಮೇಶ್ ಜಾರಕಿಹೊಳಿ

ಬೆಳಗಾವಿ: ‘ಇವತ್ತು ಮಧ್ಯಾಹ್ನದ ನಂತರ ರಾಜೀನಾಮೆ ನಿರ್ಧಾರದ ಬಗ್ಗೆ ಯೋಚನೆ ಮಾಡುತ್ತೇನೆ’ ಅಂತಾ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸಚಿವ ಸ್ಥಾನದಿಂದ ಕೈಬಿಟ್ಟ ನಂತರ ಕಾಂಗ್ರೆಸ್​ನಿಂದ ಮುನಿಸಿಕೊಂಡಿದ್ದ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್​ ಜಾರಕಿಹೊಳಿ, ಕೊನೆಗೂ ಕಾಂಗ್ರೆಸ್​ ತೊರೆಯುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಧ್ಯಾಹ್ನದ ನಂತರ ರಾಜೀನಾಮೆಗೆ ಯೋಚನೆ ಮಾಡುತ್ತೇನೆ ಎಂದರು. ನಿನ್ನೆಯಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್​ನಿಂದ ನನಗೆ ಮೋಸ ಆಗಿದೆ. ಕಾಂಗ್ರೆಸ್​ಗೆ ರಾಜೀನಾಮೆ ಕೊಟ್ಟು ನನ್ನ ವಿರುದ್ಧ ಆರೋಪ ಮಾಡೋರಿಗೆ ಉತ್ತರ ಕೊಡ್ತೀನಿ ಎಂದಿದ್ದರು. ಅದ್ರಂತೆ ಇಂದು ರಮೇಶ್ ಜಾರಕಿಹೊಳಿ ಬೆಳಗಾವಿಯಿಂದ ಬೆಂಗಳೂರಿಗೆ ಬಂದು ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಬಳಿಕ ಕಾನೂನಾತ್ಮಕ ಕ್ರಮಗಳ ಬಗ್ಗೆ ವಕೀಲರ ಜೊತೆ ಚರ್ಚಿಸಿ, ರಾಜೀನಾಮೆ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv