ರಾಮನಗರ ಬಿಜೆಪಿ ಅಧ್ಯಕ್ಷರಾಗಿ ರುದ್ರೇಶ್ ನೇಮಕ

ಬೆಂಗಳೂರು: ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಎಂ.ರುದ್ರೇಶ್ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ರಾಮನಗರ ಜಿಲ್ಲಾಧ್ಯಕ್ಷರಾಗಿದ್ದ ಹುಲವಾಡಿ ದೇವರಾಜ್​ರಿಗೆ ಬಿಜೆಪಿ ಸ್ಲಂ ಮೋರ್ಚಾ ಕಾರ್ಯದರ್ಶಿ ಯನ್ನಾಗಿ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ ಎಂ.ರುದ್ರೇಶ್​​ಗೆ ಜಿಲ್ಲಾಧ್ಯಕ್ಷ ಸ್ಥಾನ ಒಲಿದಿದೆ.

ಪಕ್ಷ ಸಂಘಟನೆ ತಳಮಟ್ಟದಿಂದ ಮಾಡಿ, ಜಿಲ್ಲೆಯಲ್ಲಿ ಬಿಜೆಪಿಯನ್ನ ಸದೃಢಗೊಳಿಸಬೇಕು. ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಿ ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸು ಹೆಚ್ಚಿಸುವಂತೆ ನೂತನ ಅಧ್ಯಕ್ಷರಿಗೆ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv