ಮಂಡ್ಯದ ಅಖಾಡಕ್ಕೆ ರಮ್ಯಾ ತಾಯಿ ಎಂಟ್ರಿ: ಟಿಕೆಟ್‌ ಬೇಕು ಅಂತಾ ಡಿಮ್ಯಾಂಡ್‌!

ಮಂಡ್ಯ: ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್​-ಜೆಡಿಎಸ್​ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್​ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಇನ್ನು ಅಭ್ಯರ್ಥಿ ಆಯ್ಕೆ ನಡೆದಿಲ್ಲ. ದೇವೇಗೌಡ ಕುಟುಂಬದ ನಿಖಿಲ್​ ಕುಮಾರಸ್ವಾಮಿ ಹಾಗೂ ಪ್ರಜ್ವಲ್​ ರೇವಣ್ಣ ಇಬ್ಬರು ಸ್ಪರ್ಧಿಸುವ ಊಹಾಪೋಹ ಎದ್ದಿತ್ತು. ಆದ್ರೆ, ಇದಕ್ಕೆ ಸ್ವತಃ ಹೆಚ್‌.ಡಿ.ದೇವಗೌಡರೇ ತೆರೆ ಎಳೆದಿದ್ದಾರೆ.

ಹಾಗಾಗಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಮುಂದುವರೆದಿದೆ. ಇದರ ನಡುವೆ ಮಾಜಿ ಸಂಸದೆ ರಮ್ಯಾ ಅವರ ತಾಯಿ ನಾನು ಕೂಡ ಮಂಡ್ಯ ಟಿಕೆಟ್‌ ಆಕಾಂಕ್ಷಿ ಎನ್ನುವ ಮೂಲಕ ಹೊಸ ಬಾಂಬ್​ ಸಿಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಆಕಾಂಕ್ಷಿ, ನನಗೂ ಒಂದು ಅವಕಾಶ ಮಾಡಿಕೊಡಿ ಎಂದು ಪಕ್ಷದ ನಾಯಕರಿಗೆ ಮನವಿ ಮಾಡಿದ್ದಾರೆ.

ಉಪಚುನಾವಣೆಯಲ್ಲಿ ಅಭ್ಯರ್ಥಿ ಹಾಕದಿದ್ದರೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ. ನಮಗೆ 5ಲಕ್ಷ ಮತದಾರಿದ್ದಾರೆ. ಕಾರ್ಯಕರ್ತರಿದ್ದಾರೆ. ಅವರನ್ನೆಲ್ಲಾ ಅನಾಥರನ್ನಾಗಿ ಮಾಡುವುದು ಬೇಡ. ಹಾಗಾಗಿ ಅಭ್ಯರ್ಥಿಯನ್ನು ಹಾಕುವಂತೆ ಎಲ್ಲಾ ಕಾಂಗ್ರೆಸ್ ಮುಖಂಡರಿಗೆ ಕರೆಮಾಡಿ ಮನವಿ‌ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಅವರೆಲ್ಲರೂ ವರಿಷ್ಠರಿಗೆ ಅಭ್ಯರ್ಥಿಯನ್ನು ಹಾಕುವಂತೆ ತಿಳಿಸಿದ್ದಾರೆ. ಇವತ್ತು ಅಥವಾ ನಾಳೆ‌ ಒಳಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ ಎಂದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv