ದಸರಾ ಮೆರಗು ಹೆಚ್ಚಿಸಿದ ರಂಗು ರಂಗಿನ ರಂಗೋಲಿ ಚಿತ್ತಾರ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂದವನ್ನು ರಂಗೋಲಿಯ ರಂಗು ಮತ್ತಷ್ಟು ಹೆಚ್ಚಿಸಿದೆ. ದಸರಾ ಕಾರ್ಯಕ್ರಮದ 2ನೇ ದಿನವಾದ ಇಂದು ಅರಮನೆ ಮುಂಭಾಗದಲ್ಲಿ ರಂಗೋಲಿ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಚಾಲನೆ ನೀಡಿದ್ರು. ರಂಗೋಲಿ ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಸ್ಪರ್ಧಾಳುಗಳು ವಿವಿಧ ಬಗೆಯ ಕಲರ್ ಫುಲ್‌ ರಂಗೋಲಿ ಹಾಕಿದರು. ಮಹಿಳೆಯರು ಮತ್ತು ಮಕ್ಕಳ ಕೈಯಿಂದ ಅರಳುತ್ತಿರೋ ವಿವಿಧ ರೀತಿಯ ಬಣ್ಣ ಬಣ್ಣದ ರಂಗೋಲಿಯ ಚಿತ್ತಾರ ದಸರಾ ಮೆರಗನ್ನು ಮತ್ತಷ್ಟು ಹೆಚ್ಚಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv