ಮಧ್ಯಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಪ್ರತಿಭಟನೆ

ಕಲಬುರಗಿ: ಮಧ್ಯಪ್ರದೇಶದ ಮಂಡಸೌರನಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ನಗರದಲ್ಲಿ ವಿದ್ಯಾರ್ಥಿ ಸಂಘಟನೆಗಳಿಂದ ಧರಣಿ ನಡೆಯಿತು. ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ AIMSS, AIDYO ಮತ್ತು AIDSO ಸಂಘಟನೆಗಳ ಸದಸ್ಯರಿಂದ ಪ್ರತಿಭಟನೆ ನಡೆಸಲಾಯಿತು. ದೇಶದಲ್ಲಿ ದಿನೇದಿನೆ ಮುಗ್ಧ ಬಾಲಕಿಯರ ಮೇಲೆ ಅತ್ಯಾಚಾರ‌ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ರು.

ಅತ್ಯಾಚಾರ ಆರೋಪಿಗಳ ವಿಚಾರಣೆಯನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್​​ನಲ್ಲಿ ವಿಚಾರಣೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಧರಣಿನಿರತರು ಆಗ್ರಹಿಸಿದರು. ಈ ವೇಳೆ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ ಜಿಲ್ಲಾ ಕಾರ್ಯದರ್ಶಿ ನಿಂಗಣ್ಣ ಜಂಬಗಿ, ಆಲ್ ಇಂಡಿಯಾ‌ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾಧ್ಯಕ್ಷೆ ಡಾ. ಸೀಮಾ ದೇಶಪಾಂಡೆ ಮತ್ತು ಆಲ್ ಇಂಡಿಯಾ‌ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾಧ್ಯಕ್ಷ ಡಾ.ಮಲ್ಲಿನಾಥ್ ಸಿಂಘೆ ಸೇರಿದಂತೆ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv