ಅತ್ಯಾಚಾರ ಆರೋಪ: ಬಿಡದಿಯ ನಿತ್ಯಾನಂದಗೆ ಸುಪ್ರೀಂ ಕೋರ್ಟ್​​ನಲ್ಲಿ ಮುಖಭಂಗ

ನವದೆಹಲಿ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿಯ ನಿತ್ಯಾನಂದ ಸ್ವಾಮಿಗೆ ಸುಪ್ರೀಂ ಸಂಕಷ್ಟ ಎದುರಾಗಿದೆ. ತನ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣಗಳನ್ನು ಕೈಬಿಡಬೇಕು ಎಂದು ನಿತ್ಯಾನಂದ ಅಂಡ್​ ಕಂಪನಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಆರೋಪಿ ನಿತ್ಯಾನಂದ ಸ್ವಾಮಿ ವಿರುದ್ಧದ ಅತ್ಯಾಚಾರ ಪ್ರಕರಣಗಳ ತನಿಖೆ ಮುಂದುವರಿಯಲಿ. ಅದಕ್ಕೆ ತಡೆಯಾಜ್ಞೆ ನೀಡಲಾಗದು ಎಂದು  ಸ್ಪಷ್ಟಪಡಿಸಿದೆ.

ಕಳೆದ ತಿಂಗಳು ನಿತ್ಯಾನಂದ ಮತ್ತು ಅವರ ಅನುಯಾಯಿಗಳು ಕರ್ನಾಟಕ ಹೈಕೋರ್ಟ್​ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಸಿ, ತಮ್ಮ ವಿರುದ್ಧದ ರೇಪ್​ ಪ್ರಕರಣಗಳನ್ನು ಕೈಬಿಡಬೇಕು ಎಂದು ಕೋರಿದ್ದರು. ಆದರೆ ಹೈಕೋರ್ಟ್​ ಅದಕ್ಕೆ ಅವಕಾಶ ನೀಡದೆ, ವಿಚಾರಣೆ ಮುಂದುವರಿಯಲಿ ಎಂದು ಆದೇಶಿಸಿತ್ತು. ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಕದ ತಟ್ಟಿದ್ದರು. ರಾಮನಗರ ವಿಚಾರಣಾ ನ್ಯಾಯಾಲಯ ಮುಂದಿನ ವಾರ ಸದರಿ ಪ್ರಕರಣವನ್ನು ಆಲಿಸಲಿದೆ. ಅಂದಹಾಗೆ ಪ್ರಕರಣ ಸುಮಾರು 8 ವರ್ಷಗಳ ಹಿಂದಿನದ್ದು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv