ಅಪ್ರಾಪ್ತೆ ಮೇಲೆ ಅತ್ಯಾಚಾರ, ಆರೋಪಿ ಅಂದರ್​

ಕೊಪ್ಪಳ: ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್​ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪ್ರಾಪ್ತೆಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ. ಈ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಮುನಿರಾಬಾದ್​ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv