ಬಾಲಕಿ ಮೇಲೆ ಅತ್ಯಾಚಾರ: ಪರಾರಿಯಾಗಿದ್ದ ಆರೋಪಿ ಬಂಧನ

ಕೊಪ್ಪಳ: ಅಪ್ರಾಪ್ತ ವಯಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಕೊಪ್ಪಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಚಾಂದಸಾಬ್ ಅದೇ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಈ ಸಂಬಂಧ ಕೇಸು ದಾಖಲಿಸಿಕೊಂಡಿದ್ದ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಇಂದು ಆರೋಪಿಯನ್ನು ಬಾಗಲಕೋಟೆಯಲ್ಲಿ ಬಂಧಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv