ವಿಡಿಯೋ ಕಾಲ್ ಮೂಲಕ ಸುಮಲತಾಗೆ ಕೆ. ರತ್ನಪ್ರಭಾ ಬೆಂಬಲ..!

ಕಲಬುರಗಿ: ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಮಹಿಳೆಯರೆಲ್ಲರೂ ನಿಮ್ಮ ಜೊತೆಗಿದ್ದೇವೆ ಎಂಬ ಸಂದೇಶವನ್ನು ಅವರು ರವಾನೆ ಮಾಡಿದ್ದಾರೆ.  ಇಂದು ಬಿಜೆಪಿ ನಾಯಕಿ ಕೆ.ರತ್ನಪ್ರಭಾ ಸುಮಲತಾ ಅಂಬರೀಶ್ ಗೆ ವಿಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ್ದಾರೆ. ಇಂದು ಹೈದರಾಬಾದ್ ಕರ್ನಾಟಕ ಭಾಗದ ಮಹಿಳೆಯರ ಜೊತೆ ಸಂವಾದ ನಡೆಸುತಿದ್ದ ಕೆ.ರತ್ನಪ್ರಭಾ, ಸಂವಾದದ ಮಧ್ಯೆಯೇ ಮಹಿಳೆಯರೊಟ್ಟಿಗೆ ಸುಮಲತಾ ಅಂಬರೀಶ್‌ಗೆ ವಿಡಿಯೋ ಕಾಲ್ ಮಾಡಿ ಹೈದ್ರಾಬಾದ್​​ ಕರ್ನಾಟಕ ಮಹಿಳೆಯರೆಲ್ಲರೂ ನಿಮ್ಮ ಬೆಂಬಲಕ್ಕಿದ್ದೇವೆ ಎಂದು ಧೈರ್ಯ ಹೇಳಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv