ಗೋಕರ್ಣ ದೇಗುಲ ಆಡಳಿತ ಹಸ್ತಾಂತರ ಕುರಿತು ಮತ್ತೆ ಗೊಂದಲ

ಕಾರವಾರ: ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ಮಂಡಳಿ ಹಸ್ತಾಂತರ ಕುರಿತು ಮತ್ತೆ ಗೊಂದಲ ಉಂಟಾಗಿದೆ. ಇತ್ತೀಚೆಗೆ ಸುಪ್ರಿಂಕೋರ್ಟ್‌ ಹೊರಡಿಸಿದ ಮಧ್ಯಂತರ ಆದೇಶದ ಬಗ್ಗೆ ಸ್ಪಷ್ಟತೆ ಕೋರಲು ಸರಕಾರ ಮುಂದಾಗಿದ್ದು. ಅಡ್ವೋಕೆಟ್ ಜನರಲ್ ಅವರ ಅಭಿಪ್ರಾಯ ಕೇಳಿದ ನಂತರವೇ ಮುಂದಿನ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದೆ. ಜಿಲ್ಲಾಡಳಿತ ಈ ಕುರಿತು ಮತ್ತೊಮ್ಮೆ ಸರ್ಕಾರಕ್ಕೆ ಪತ್ರ ಬರೆದು ಆಡಳಿತ ಹಸ್ತಾಂತರಿಸಬೇಕೆ ಇಲ್ಲವೇ ಎನ್ನುವ ಬಗ್ಗೆ ಸ್ಪಷ್ಟನೆ ಕೋರಿದೆ. ಹೀಗಾಗಿ ಅಡ್ವೋಕೆಟ್ ಜನರಲ್ ಅವರ ಅಭಿಪ್ರಾಯ ಬಂದ ನಂತರವೇ ನ್ಯಾಯಾಲಯದ ಆದೇಶದಂತೆ ಜಿಲ್ಲಾಡಳಿತ ನಡೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ.

ಸೆಪ್ಟಬಂರ್​ 19 ರಂದು ಹೈಕೋರ್ಟ್ ಆದೇಶದ ಮೇರೆಗೆ ಗೋರ್ಕಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರೂ ಅಗಿರುವ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ದೇವಸ್ಥಾನನದ ಆಡಳಿತವನ್ನು ವಹಿಸಿಕೊಂಡಿದ್ದರು. ಆದರೆ ಈ ಕುರಿತು ರಾಮಚಂದ್ರಾಪುರ ಮಠ ಸುಪ್ರಿಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ಅಕ್ಟೂಬರ್​ 3 ರಂದು ಸುಪ್ರೀಂಕೋರ್ಟ್, ಅಂತಿಮ ತೀರ್ಪು ಪ್ರಕಟವಾಗುವವರೆಗೂ ಗೋಕರ್ಣ ದೇವಸ್ಥಾನದ ಹಸ್ತಾಂತರ ಪ್ರಕ್ರಿಯೆ ಬೇಡ ಎಂದು ತಡೆ ನೀಡಿತ್ತು. ಹೀಗಾಗಿ ಜಿಲ್ಲಾಡಳಿತಕ್ಕೆ ಮುಂದಿನ ನಡೆಯ ಕುರಿತು ಗೊಂದಲ ಏರ್ಪಟ್ಟಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv