ಜಿಲ್ಲಾ ರೆಡ್​ ಕ್ರಾಸ್​​ ಸಂಸ್ಥೆಗೆ ಪ್ರಥಮ ಬಹುಮಾನ

ಕಲಬುರ್ಗಿ: 2017-18ರಲ್ಲಿ ಉತ್ತಮ ಸಾಧನೆಗಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಲಬುರ್ಗಿ ಶಾಖೆಗೆ ಪ್ರಥಮ ಬಹುಮಾನ ನೀಡಲಾಗಿದೆ ಎಂದು ಜಿಲ್ಲಾ ಪದಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೆಡ್‌ ಕ್ರಾಸ್‌ ಪದಾಧಿಕಾರಿಗಳು, ಮೇ 22ರಂದು ಬೆಂಗಳೂರಿನ ರಾಜಭವನದಲ್ಲಿ‌ ನಡೆದ ಸಮಾರಂಭದಲ್ಲಿ‌ ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ ಎಂದು ತಿಳಿಸಿದರು. ಜ್ಯೂನಿಯರ್ ರೆಡ್ ಕ್ರಾಸ್ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಕಲಬುರ್ಗಿಯಿಂದ ಅತಿಹೆಚ್ಚು ವಿದ್ಯಾರ್ಥಿಗಳು ಹಾಜರಾಗೋ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಕಲಬುರ್ಗಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಸ್ನಾತಕೋತ್ತರ ಕೇಂದ್ರದಲ್ಲಿ‌ ಜೂನ್ 2 ರಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ನಡೆಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದರು. ಪ್ರತಿ ವರ್ಷ ಮೇ 8ರಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ ಆಚರಿಸಾಗುತ್ತಿತ್ತು. ಆದ್ರೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು ಎಂದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv