ಶಾಲಾ ಮಕ್ಕಳಿಂದ ರಸ್ತೆ ಜಾಗೃತಿ ಜಾಥಾ

ಚಿತ್ರದುರ್ಗ: ಶಾಲಾ ಮಕ್ಕಳಿಂದ ಮಾನವ ಸರಪಳಿ ನಿರ್ಮಿಸಿ ಪೊಲೀಸರು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿದರು. ನಗರದ ಗಾಂಧಿ ವೃತ್ತದ ಬಳಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಹೆಲ್ಮೆಟ್​​ ಧರಿಸದೇ ಬಂದ ಬೈಕ್​​ ಸವಾರರಿಗೆ ಗುಲಾಬಿ ಹೂ ನೀಡಿ, ರಸ್ತೆ ಸುರಕ್ಷತೆ ಬಗ್ಗೆ ಪೊಲೀಸರು ಅರಿವು ಮೂಡಿಸಿದರು. ಇನ್ನು ಗಾಂಧಿ ವೃತ್ತದಿಂದ ಒನಕೆ ಓಬವ್ವ ವೃತ್ತದವರೆಗೆ ಸುರಕ್ಷತಾ ಜಾಥಾ ನಡೆಸಲಾಯಿತು. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಶ್ರೀನಾಥ್​​ ಜೋಶಿ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ವೇಳೆ ನಗರದ ವಿವಿಧ ಶಾಲೆಗಳ ಮಕ್ಕಳು ಜಾಗೃತಿ ಶಿಬಿರದಲ್ಲಿ ಭಾಗಿಯಾಗಿ ರಸ್ತೆ ಜಾಗೃತಿ ಕುರಿತು ಅರಿವು ಮೂಡಿಸಲಾಯಿತು.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂರ್ಪಕಿಸಿ:contact@firstnews.tv