ಡಾಂಬರೀಕರಣ ಮಾಡಿದ 1 ತಿಂಗಳಲ್ಲೇ ಬಿತ್ತು ಹಳ್ಳ!

ಬಳ್ಳಾರಿ: ಹೊಸದಾಗಿ ಡಾಂಬರೀಕರಣ ಮಾಡಿದ ಸೇತುವೆ ರಸ್ತೆಯಲ್ಲಿ ದೊಡ್ಡ ಹಳ್ಳ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಕೂಡ್ಲಿಗಿ ತಾಲೂಕಿನ ಕಾನಹೊಸಳ್ಳಿ-ಕಾನಮಡುಗು ಗ್ರಾಮದ ಮೂಲಕ ದಾವಣಗೆರೆ, ಜಗಳೂರು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ರಸ್ತೆಯಲ್ಲಿ ದೊಡ್ಡ ಹಳ್ಳ ಬಿದ್ದಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಡಾಂಬರೀಕರಣ ಮಾಡಲಾಗಿತ್ತು. ಕಳಪೆ ಮಟ್ಟದಲ್ಲಿ ಡಾಂಬರೀಕರಣ ಮಾಡಿದ್ದರಿಂದ ಬಸ್ ಸಂಚರಿಸುವಾಗ ರಸ್ತೆಯಲ್ಲಿ ಹಳ್ಳ ಬಿದ್ದಿದೆ. ಇದರಿಂದ ಕಳೆದ 15 ದಿನಗಳಿಂದ ಸಂಚಾರ ಅಸ್ತವ್ಯಸ್ತವಾಗಿದ್ದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ. ಹೀಗಾಗಿ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದು, ಗುತ್ತಿಗೆದಾರರ ಮೇಲೆ ಕ್ರಮಗೊಳ್ಳಬೇಕು ಹಾಗೂ ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv