ಮಹಿಳಾ ಮತದಾರರು ಹೆಚ್ಚಿರುವ ಕಡೆ ಸಖಿ ಪೋಲಿಂಗ್ ಬೂತ್ ನಿರ್ಮಾಣ

ಮೈಸೂರು: ನಾಳೆ ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಹೀಗಾಗಿ ಮಹಿಳಾ ಮತದಾರರು ಹೆಚ್ಚಿರುವ ಕಡೆ ಅವರನ್ನ ಮತಗಟ್ಟೆಯತ್ತ ಸೆಳೆಯಲು ನಗರದ ತ್ಯಾಗರಾಜು ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಸಖಿ ಪೋಲಿಂಗ್ ಬೂತ್ ನಿರ್ಮಾಣವಾಗಿದೆ. ಮತಗಟ್ಟೆ ಅಧಿಕಾರಿಗಳಾಗಿ ಹಾಗೂ ಭದ್ರತಾ ಸಿಬ್ಬಂದಿ ಸಂಪೂರ್ಣವಾಗಿ ಮಹಿಳೆಯರೇ ಕಾರ್ಯ ನಿರ್ವಹಿಸುತ್ತಾರೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 22 ಸಖಿ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಮೈಸೂರಿನ 6 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2 ರಂತೆ 12 ಸಖಿ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಇನ್ನು
ಕೊಡಗು ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5 ರಂತೆ 10 ಸಖಿ ಮತಗಟ್ಟೆಗಳ ಸ್ಥಾಪನೆಯಾಗಿದೆ.

 

 

 

 

 

 

 

 

 

 

 


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv