ಮರಳು, ಟಿಂಬರ್ ಸಾಗಾಟಕ್ಕೆ ತಾತ್ಕಾಲಿಕ ನಿಷೇಧ

ಕೊಡಗು: ಭಾರೀ ವಾಹನಗಳ ಸಂಚಾರದಿಂದ ಜಿಲ್ಲೆಯ ರಸ್ತೆಗಳು ಹಾನಿಗೊಳಗಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಮರಳು ಹಾಗೂ ಟಿಂಬರ್ ಸಾಗಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದು, ಆಗಸ್ಟ್ 31 ರವರೆಗೆ ಅನ್ವಯವಾಗಲಿದೆ. ಕಳೆದ ಎರಡು ತಿಂಗಳಲ್ಲಿ ಸುರಿದ ಭಾರೀ ಮಳೆಗೆ ಸಾಕಷ್ಟು ಕಡೆ ರಸ್ತೆ ಕುಸಿತಕ್ಕೊಳಗಾಗಿದ್ದು, ದುರಸ್ತಿ ಕಾರ್ಯ ಕೂಡಾ ನಡೆಯುತ್ತಿದೆ. ಈ ನಡುವೆ ರಸ್ತೆಬದಿ ಟಿಂಬರ್ ಲೋಡ್ ಮಾಡುವುದು, ಗ್ರಾಮೀಣ ರಸ್ತೆಗಳಲ್ಲಿ ದೊಡ್ಡ ದೊಡ್ಡ ಲಾರಿಗಳಲ್ಲಿ ಟಿಂಬರ್ ಸಾಗಿಸಲಾಗುತ್ತಿತ್ತು. ಇದಕ್ಕೆ ನಿರ್ಬಂಧ ಹೇರುವಂತೆ ಸಾರ್ವಜನಿಕರಿಂದ ಒತ್ತಡ ಬಂದ ಹಿನ್ನೆಲೆ ಟಿಂಬರ್ ಹಾಗೂ ಮರಳು ಸಾಗಣೆಗೆ ತಾತ್ಕಾಲಿಕ ನಿಷೇಧಿಸಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv