ಕಡಿದು ಮೂರು ತುಂಡು ಮಾಡಿದ್ರು.. ಎರಡನ್ನ ಅಲ್ಲೇ ಬಿಟ್ರು, ಒಂದನ್ನ ಸಾಗಿಸಿದ್ರು..!

ಕೊಡಗು: ಗಂಧದ ಮರವನ್ನು ಕಡಿದು, ತುಂಡುಗಳಾಗಿ ಮಾಡಿ ಕಳ್ಳತನ ಮಾಡಲಾಗಿದೆ. ಈ ಘಟನೆ ಗೋಣಿಕೊಪ್ಪಲು ಪೊಲೀಸ್ ಠಾಣೆ ಬಳಿ ನಡೆದಿದೆ. ಪಟ್ಟಣದ ಜ್ಯೂಸ್ ಫ್ಯಾಕ್ಟರಿ ರಸ್ತೆಯ ಸಮೀಪ ಖಾಸಗಿ ಜಾಗದಲ್ಲಿ ಗುರುವಾರ ರಾತ್ರಿ ಕಳ್ಳರು ಈ ದುಷ್ಕತ್ಯ ಎಸಗಿದ್ದಾರೆ. ಮರವನ್ನು ಮೂರು ತುಂಡುಗಳನ್ನಾಗಿ ಕತ್ತರಿಸಿ ಪ್ರಮುಖ ಭಾಗವನ್ನು ಸಾಗಿಸಿದ್ದಾರೆ. ಆದರೆ ಇನ್ನುಳಿದ 2 ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಸಾರ್ವಜನಿಕರು ಬಂದ ಹಿನ್ನೆಲೆಯಲ್ಲಿ ಅವುಗಳನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊನ್ನಂಪೇಟೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಲ್ಲಿದ್ದ ಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv