ಜಿಲ್ಲಾ ಕಾರಾಗೃಹದಲ್ಲಿ ಸುಗಮ ಸಂಗೀತ

ಕಾರವಾರ: ವಿವಿಧ ಪ್ರಕರಣಗಳಲ್ಲಿ ಬಂಧಿಯಾಗಿ ಜಿಲ್ಲಾ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ನೂರಾರು ಕೈದಿಗಳಿಗೆ ಇಂದು ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಸುಗಮ ಸಂಗೀತಗಾರ್ತಿ ದೀಪ್ತಿ ಅರ್ಗೇಕರ್ ತಂಡ ಸಂಗೀತ ರಸದೌತಣ ನೀಡಿತು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv