ಸಸಿ ನೆಟ್ಟು ಪರಿಸರ ದಿನಾಚರಣೆ

ಕೊಪ್ಪಳ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೊಪ್ಪಳದಲ್ಲಿ ವಿಶ್ವ ಪರಿಸರ ಸಪ್ತಾಹ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತ್ತು. ಅರಣ್ಯ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಗವಿಮಠದ ಅಭಿನವಶ್ರೀಗಳು ಸಸಿ ನೆಡುವ ಮೂಲಕ ಚಾಲನೆ ನೀಡಿದ್ರು. ನಗರದ ಬಸವೇಶ್ವರ ವೃತ್ತದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿ ಸಹ ಭಾಗವಹಿಸಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv