ಎನ್​.ಮಹೇಶ್ ರಿಸೈನ್ ಮಾಡಿದ್ದು ಪಕ್ಷ ಸಂಘಟನೆಗಾಗಿ: ಸಾ.ರಾ.ಮಹೇಶ್​

ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಮತ ಹಾಗೂ ಅಸಮಾಧಾನ ಇಲ್ಲ. ಎನ್​.ಮಹೇಶ್​ ಪಕ್ಷ ಸಂಘಟನೆಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್​ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್​.ಮಹೇಶ್ ತಮ್ಮ ರಾಜೀನಾಮೆಗೆ ಕಾರಣವನ್ನೂ ಕೊಟ್ಟಿದ್ದಾರೆ. ಅವರಿಗೆ ಸಚಿವ ಸ್ಥಾನ ನಿಭಾಯಿಸಲು ಆಗಲಿಲ್ಲ ಅನ್ನೋದು ಸುಳ್ಳು. ಕಳೆದ ನಾಲ್ಕು ತಿಂಗಳಿನಿಂದ ಕೊಟ್ಟ ಎಲ್ಲ ಕೆಲಸವನ್ನು ನಿಭಾಯಿಸಿದ್ದಾರೆ. ಹೀಗಾಗಿ ಅವರನ್ನ ಸಂಪರ್ಕಿಸಿ ಮನವೋಲಿಸುವ ಪ್ರಯತ್ನ ಮಾಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಆಗಿದೇಯೋ ಇಲ್ಲವೋ ನನಗೆ ಮಾಹಿತಿ ಇಲ್ಲ ಎಂದರು. ನಿನ್ನೆ ಸಂಜೆ ದಿಢೀರ್ ಅಂತಾ ಸುದ್ದಿಗೋಷ್ಠಿ ನಡೆಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv