ರಿಲ್ಯಾಕ್ಸ್​ ಮೂಡಿಗೆ ಜಾರಿದ ಜಾರಕಿಹೊಳಿ..!

ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಹಿರಿಯ ಕಾಂಗ್ರೆಸ್​ ಶಾಸಕ ಸತೀಶ್​ ಜಾರಕಿಹೊಳಿ, ಬೆಳಗಾವಿಯ ಜಾಧವ ನಗರದಲ್ಲಿರುವ ತಮ್ಮ ನಿವಾಸದಲ್ಲೇ ಕಾಲ ಕಳೆಯುತ್ತಿದ್ದಾರೆ.
ಸತೀಶ್​ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಜಾರಕಿಹೊಳಿ ಸಭೆಗಳಲ್ಲಿಯೇ ಬ್ಯುಸಿಯಾಗಿದ್ದರು. ಇಂದು ಅವರ ನಿವಾಸದಲ್ಲಿ ತಮ್ಮ ಬೆಂಬಲಿಗರ ಜೊತೆಗೆ ಜಾರಕಿಹೊಳಿ ರಿಲ್ಯಾಕ್ಸ್​ ಮೂಡಿಗೆ ಹೋಗಿದ್ದಾರೆ. ಹಾಗೇ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv