ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಿಸೈನ್

ಬೆಂಗಳೂರು: ಮಾಜಿ ಸಚಿವ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಈ-ಮೇಲ್ ಮೂಲಕ ರಾಜೀನಾಮೆ ರವಾನಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಈ-ಮೇಲ್ ಮೂಲಕ ರಾಜೀನಾಮೆ ರವಾನೆ ಮಾಡಿದ್ದಾರೆ. ವೈಯಕ್ತಿಕ ಕಾರಣ ಕೊಟ್ಟು ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿರೋದು ತಿಳಿದು ಬಂದಿದೆ. ನಾನು ಕಳೆದ ಬಾರಿ ಮಂತ್ರಿ ಸ್ಥಾನ ತ್ಯಾಗ ಮಾಡಿದ್ದೇ. ಈ ಬಾರಿ ನನಗೆ ಸಚಿವ ಸ್ಥಾನ ಸಿಗಲಿಲ್ಲ.ಜೊತೆಗೆ ನನ್ನ ಬೆಂಬಲಿಗರಿಗೂ ಸಚಿವ ಸ್ಥಾನ ಕೊಡಿಸಲು ಆಗಲಿಲ್ಲ. ಹೀಗಾಗಿ ನಾನು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ . ಇದನ್ನು ಸ್ವೀಕರಿಸಿ ಎಂದು ಮೇಲ್‌ನಲ್ಲಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv