ಸತೀಶ್​ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ರಸ್ತೆ ತಡೆದು ಆಕ್ರೋಶ

ಬೆಳಗಾವಿ: ಕಾಂಗ್ರೆಸ್​ ಹಿರಿಯ ಶಾಸಕ ಸತೀಶ್​ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸತೀಶ್​​ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಜಾರಕಿಹೊಳಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಹೆದ್ದಾರಿ ತಡೆ ಮಾಡದಂತೆ ಪ್ರತಿಭಟನಾಕಾರರನ್ನು ಪೊಲೀಸರು ಹೆದ್ದಾರಿಯಿಂದ ಹೊರ ಹಾಕಿದ್ದಾರೆ. ಇನ್ನೂ ಪ್ರತಿಭಟನಕಾರರು ಹೆದ್ದಾರಿಗೆ ಹೊಂದಿಕೊಂಡ ಸರ್ವಿಸ್ ರಸ್ತೆಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv