ಸತೀಶ್​ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಅರೆಬೆತ್ತಲೆ ಮೆರವಣಿಗೆ

ಬೆಳಗಾವಿ: ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ತಪ್ಪಿದ ಕಾರಣ ಮಾನವ ಬಂಧುತ್ವ ವೇದಿಕೆಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾರ್ಯಕರ್ತರು ಟೈಯರ್​​​​ಗೆ ಬೆಂಕಿ ಹಚ್ಚಿ ಆಕ್ರೋಶ ‌ವ್ಯಕ್ತಪಡಿಸಿದರು. ಇದಕ್ಕೂ‌ ಮೊದಲು ಬೆಳಗಾವಿಯ ಸತೀಶ್ ಜಾರಕಿಹೊಳಿ ಅವರ ಗೃಹ ಕಚೇರಿಯಿಂದ ‌ಚೆನ್ನಮ್ಮ ವೃತ್ತದವರೆಗೆ ಅರೆ ಬೆತ್ತಲೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಳಿಕ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯ ನಾಯಕರ ವಿರುದ್ಧವೂ ಅಸಮಾಧಾನ ‌ವ್ಯಕ್ತಪಡಿಸಿದ ಕಾರ್ಯಕರ್ತರು, ಎಐಸಿಸಿ ಕಾರ್ಯದರ್ಶಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸತೀಶ ಜಾರಕಿಹೊಳಿ ಅವರನ್ನು ಆಗ್ರಹಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv