ಬೊಮ್ಮನಹಳ್ಳಿಯಿಂದ ಸತೀಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಮಕ್ಕಳ ಜೊತೆ ಬೊಮ್ಮನಹಳ್ಳಿ ಬಿಬಿಎಂಪಿ ಕಚೇರಿಗೆ ಬಂದ ಸತೀಶ್ ರೆಡ್ಡಿ ನಾಮಪತ್ರ ಸಲ್ಲಿಸಿದ್ರು. ಇದಕ್ಕೂ ಮೊದಲು ಹೊಂಗಸಂದ್ರ ಗ್ರಾಮದೇವತೆಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಆಂಜನೇಯ ಸ್ವಾಮಿ ಹಾಗೂ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ರು. ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಱಲಿ ನಡೆಸಿ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ರು.

Leave a Reply

Your email address will not be published. Required fields are marked *