ಶಾಲಾ ಬಸ್, ಟಾಟಾ ಸುಮೋ ಡಿಕ್ಕಿ- ಮಕ್ಕಳು ಪ್ರಾಣಾಪಾಯದಿಂದ ಪಾರು

ಆನೇಕಲ್: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಬಸ್​ ಮತ್ತು ಎದುರಿಗೆ ಬರುತ್ತಿದ್ದ ಟಾಟಾ ಸುಮೋ ಒಂದಕ್ಕೊಂದು ಡಿಕ್ಕಿ ಹೊಡೆದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ರಸ್ತೆಯ ವಿ.ಕಲ್ಲಹಳ್ಳಿ ಬಳಿ ನಡೆದಿದೆ. ಇಂದು ಬೆಳಗ್ಗೆ ನಡೆದ ಈ ಅಪಘಾತದಲ್ಲಿ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಶಾಲಾ ಬಸ್​ನಲ್ಲಿದ್ದ ಸುಮಾರು ಹತ್ತು ವಿದ್ಯಾರ್ಥಿಗಳು ಹಾಗೂ ಟಾಟಾ ಸುಮೋದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv