ಸ್ವಯಂಘೋಷಿತ ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ..!

ದೆಹಲಿ: ಸ್ವಯಂಘೋಷಿತ ದೇವಮಾನವ ದಾತಿ ಮಹಾರಾಜ್​ ಹಾಗೂ ಅವರ ಶಿಷ್ಯರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು 25ವರ್ಷದ ಮಹಿಳೆಯೋರ್ವರು ಆರೋಪಿಸಿದ್ದಾರೆ. ದಕ್ಷಿಣ ದೆಹಲಿಯ ಫತೇಪುರ್​ ಬೆರಿ ಪೊಲೀಸ್​ ಸ್ಟೇಷನ್​ನಲ್ಲಿ ದೂರು ದಾಖಲಿಸಿದ್ದಾರೆ.
ಮಹಿಳೆ ಮೇಲೆ ಸ್ವಯಂಘೋಷಿತ ಸ್ವಾಮೀಜಿ ಹಾಗೂ ಅವರ ಇಬ್ಬರು ಶಿಷ್ಯರು ಲೈಂಗಿಕ ದೌರ್ಜನ್ಯ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ಮತ್ತು ರಾಜಸ್ತಾನದ ದೇವಮಾನನ ಆಶ್ರಮದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಅಂತಾ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಆರೋಪಿಸಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಆಶ್ರಮದಿಂದ ಓಡಿಹೋಗಿದ್ದ ಮಹಿಳೆ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv