ಮಲ್ಲಳ್ಳಿ ಜಲಪಾತದಲ್ಲಿ ‘ಸೆಲ್ಫಿ ಡೆತ್​’

ಕೊಡಗು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೋರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ. ಮನೋಜ್ (24) ನೀರುಪಾಲಾದ ಯುವಕ.

ಯುವಕ ಕುಶಾಲನಗರ ಬಳಿಯ ಸುಂದರನಗರದ ನಿವಾಸಿ ಎಂದು ತಿಳಿದು ಬಂದಿದೆ. ಮೃತ ಮನೋಜ್​ ಸ್ನೇಹಿತರೊಂದಿಗೆ ಮಲ್ಲಳ್ಳಿ ಜಲಪಾತ ನೋಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿಯಾದ ಕಾರಣ, ನಾಳೆ ಶೋಧ ಕಾರ್ಯ ನಡೆಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

 

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv