20 Sep 2018
ರಾಮನಗರ: ಖಾಸಗಿ ಬಸ್ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಡದಿ ಹೆದ್ದಾರಿಯ ಕೆಂಪನಹಳ್ಳಿ ಗೇಟ್ ಬಳಿ ನಡೆದಿದೆ. ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿ ಅದನ್ನು ದಾಟಿ ರಸ್ತೆಯ ಮತ್ತೊಂದು ಬದಿಗೆ ಇಳಿದಿದೆ.
ಪರಿಣಾಮ ಬೆಂಗಳೂರು ಕಡೆಯಿಂದ ಬರುತ್ತಿದ್ದ ಮೂರು ಕಾರುಗಳು ಒಂದರ ಹಿಂದೊಂದರಂತೆ ಬಸ್ಗೆ ಡಿಕ್ಕಿಯಾಗಿವೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಡದಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firtsnews.tv