ಆ ಕರ್ಣನಂತೆ.. ನಾನೂ ಸಾಂದರ್ಭಿಕ ಶಿಶು..!

ಬೆಂಗಳೂರು: ಸಾಂದರ್ಭಿಕ ಶಿಶುವಿಗೆ ಅಪ್ಪ-ಅಮ್ಮ ಇದ್ದಾರೆ. ಮಹಾಭಾರತದ ಕರ್ಣ ಕೂಡಾ ಸಾಂದರ್ಭಿಕ ಶಿಶು ಅಂತಾ ಹೇಳುವ ಮೂಲಕ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಮ್ಮನ್ನು ಕರ್ಣನಿಗೆ ಹೋಲಿಸಿಕೊಂಡಿದ್ದಾರೆ. ಸಾಂದರ್ಭಿಕ ಶಿಶುವಿಗೆ ಅಪ್ಪ-ಅಮ್ಮ ಇರಲ್ಲ ಎಂಬ ವಿಪಕ್ಷಗಳ ಟೀಕೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸದನದಲ್ಲಿ ಖಾರವಾಗಿ ಉತ್ತರ ಕೊಟ್ಟಿದ್ದಾರೆ.

ಡಿ.ಕೆ.ರವಿ ಆತ್ಮಹತ್ಯೆ ಪ್ರಕರಣ ಹಾಗೂ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆಯೂ ಮಾತನಾಡಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಡಿ.ಕೆ.ರವಿ ಹಾಗೂ ಡಿವೈಎಸ್ ಪಿ ಎಂ.ಕೆ.ಗಣಪತಿ ಸಾವಿನ ಪ್ರಕರಣದಲ್ಲಿ ಪ್ರತಿಪಕ್ಷದಲ್ಲಿದ್ದಾಗ ನಾನು ಸಿಬಿಐಗೆ ತನಿಖೆಗೆ ಒತ್ತಾಯಿಸಿದ್ದೆ. ಡಿ.ಕೆ.ರವಿ ಪ್ರಕರಣ ಆತ್ಮಹತ್ಯೆ ಎಂದು ಸಿಬಿಐ ವರದಿ ನೀಡಿದೆ. ಮತ್ತು ಗಣಪತಿ ಪ್ರಕರಣದಲ್ಲಿ ಜಾರ್ಜ್ ಪಾತ್ರ ಏನೂ ಇಲ್ಲ ಎಂದು ನ್ಯಾಯಾಲಯ ತೀರ್ಪು ಕೊಟ್ಟಿದೆ. ಹಾಗಾಗಿ ಜಾರ್ಜ್‌ರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಂಡು ನಾನೇನು ಮಹಾಪರಾಧ ಮಾಡಿಲ್ಲ ಅಂತಾ ಸಿಎಂ ವಿಪಕ್ಷಗಳಿಗೆ ಟಾಂಗ್ ನೀಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ : contact@firstnews.tv