ಶಾಮನೂರು ಡಿಸಿಎಂ ಆಗಬೇಕೆಂದು ಪ್ರತಿಭಟನೆ

ದಾವಣಗೆರೆ :ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರನ್ನು ಡಿಸಿಎಂ ಮಾಡಲು ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಗಿದೆ.
ನಗರದ ಜಯದೇವ ಸರ್ಕಲ್ ಬಳಿ ಪ್ರತಿಭಟನೆ ನಡೆದಿದ್ದು, ಸತತ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಶ್ಯಾಮನೂರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಡಿಸಿಎಂ ಪಟ್ಟ ನೀಡಬೇಕು. ಇಲ್ಲವಾದ್ರೆ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ವೀರಶೈವ ಮಹಾಸಭಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv