ಎಂ.ಪಿ ರವೀಂದ್ರ ನಿಧನಕ್ಕೆ ಶಾಮನೂರು ಸಂತಾಪ

ದಾವಣಗೆರೆ: ಹರಪ್ಪನಹಳ್ಳಿ ಮಾಜಿ ಶಾಸಕ ಎಂ.ಪಿ ರವೀಂದ್ರ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ​ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಸಂತಾಪ ಸೂಚಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಎಂ.ಪಿ ಪ್ರಕಾಶ್ ರಾಜಕೀಯವಾಗಿ ಸಾಕಷ್ಟು ಕೆಲಸ ಮಾಡಿದ್ದರು. ಅವರ ಏಕೈಕ ಪುತ್ರ ಎಂ.ಪಿ ರವೀಂದ್ರ ಅವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದಿತ್ತು. ವೈದ್ಯರ ಮಾತನ್ನ ಕೇಳಬೇಕಿತ್ತು. ಅವರು ಚಿಕ್ಕ ವಯಸ್ಸಿನಲ್ಲೇ ವಿಧಿವಶರಾಗಿದ್ದಾರೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನ ಆ ದೇವರು ನೀಡಲಿ ಅಂತಾ ಶಾಮನೂರು ಶಿವಶಂಕರಪ್ಪ ಸಂತಾಪ ಸೂಚಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv