ಕುತೂಹಲ ಕೆರಳಿಸಿದ ದಾವಣಗೆರೆ ಕಾಂಗ್ರೆಸ್​​ ಅಭ್ಯರ್ಥಿ ಆಯ್ಕೆ, ಅಪ್ಪನಿಗೆ ಮಣೆ, ಮಗನಿಗೆ ಕೊಕ್

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುತೂಹಲ ಕೆರಳಿಸಿದೆ. ಯಾಕಂದ್ರೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ಸಚಿವ, ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಮುಖಂಡ ಎಸ್.ಎಸ್  ಮಲ್ಲಿಕಾರ್ಜುನ್ ಹೆಸರು ಇತ್ತು. ಆದ್ರೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ದಾವಣಗೆರೆ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಅವರ ಹೆಸರು ಅಂತಿಮಗೊಳಿಸಲಾಗಿದೆ. ಹೀಗಾಗಿ ಕಾಂಗ್ರೆಸ್ ಚುನಾವಣಾ ಸಮಿತಿ ಸದಸ್ಯರ ಆಯ್ಕೆ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರು ಮಗನನ್ನು ಬಿಟ್ಟು ಅಪ್ಪನಿಗೆ ಮಣೆ ಹಾಕಿದ್ದಾರೆ. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ  ಎಸ್.ಎಸ್.ಮಲ್ಲಿಕಾರ್ಜುನ್ ಪರಾಭವಗೊಂಡಿದ್ದರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕಳಿದಿದ್ದ ಅವರು, ಬಿಜೆಪಿಯ ಎಸ್.ಎ ರವೀಂದ್ರನಾಥ್ ವಿರುದ್ಧ  ಪರಾಭವಗೊಂಡಿದ್ದರು. ದಾವಣಗೆರೆ ಕ್ಷೇತ್ರದ ಟಿಕೆಟ್ ಎಸ್.ಎಸ್.ಮಲ್ಲಿಕಾರ್ಜುನ್‌ಗೆ ಸಿಗುತ್ತೆ ಅಂತಾ  ಜಿಲ್ಲಾ ಕಾಂಗ್ರೆಸ್ ಮುಖಂಡರು ನಿರೀಕ್ಷಿಸಿದ್ದರು. ಆದ್ರೆ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಪ್ಪನಿಗೆ ಮಣೆ ಹಾಕಿ, ಮಗನಿಗೆ ಕೊಕ್ ಕೊಟ್ಟಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv