ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಎನ್. ಮಹೇಶ್ ನಿನ್ನೆ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದರು. ಈ ಮೂಲಕ ಸಮ್ಮಿಶ್ರ ಸರ್ಕಾರದ ಮೊದಲ ವಿಕೆಟ್ ಪತನವಾದಂತಾಗಿದೆ. ಇದು ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದರ ನಡುವೆ ವಿಪಕ್ಷ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದು, ಸರ್ಕಾರ ರಚಿಸುವ ಇಂಗಿತವನ್ನು ಸಹ ವ್ಯಕ್ತಪಡಿಸಿದೆ. ಮಹೇಶ್ ರಾಜೀನಾಮೆ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲಿದೆ ಎಂದು ವಿಶ್ಲೇಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಎನ್. ಮಹೇಶ್ ರಾಜೀನಾಮೆ ಕುರಿತು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ರೈತ ದಸರಾ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎನ್. ಮಹೇಶ್ ಅವರು ದೇಶದಲ್ಲಿ ಕಾಂಗ್ರೆಸ್ ಗಿಡ ಕಿತ್ತು ಹಾಕಬೇಕು ಎಂದಿದ್ದಾರೆ. ಹೊರತು ಕಾಂಗ್ರೆಸ್ ಪಕ್ಷವನ್ನಲ್ಲ ಎಂದು ಹೇಳಿದ್ದಾರೆ. ಎನ್. ಮಹೇಶ್ ಅವರ ರಾಜೀನಾಮೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧ ಇಲ್ಲ. ಅವರ ಪಕ್ಷದ ಆಂತರಿಕ ವಿಚಾರದಿಂದಾಗಿ ರಾಜೀನಾಮೆ ಕೊಟ್ಟಿದ್ದಾರೆ ಎಂದರು. ಅಲ್ಲದೇ ಅವರ ರಾಜೀನಾಮೆಯ ವಿಚಾರದಲ್ಲಿ ಕಾಂಗ್ರೆಸ್ ಒತ್ತಡ ಹೇರಿಲ್ಲ. ಲೋಕಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್ಗೆ ಸಪೋರ್ಟ್ ಮಾಡುತ್ತೇನೆ ಎಂದರೆ ಕಾಂಗ್ರೆಸ್ಗೂ ಸಂಪೋರ್ಟ್ ಮಾಡ್ತಾ ಇದಾರೆ ಅಂತ ಅರ್ಥ ಎಂದರು.